ಕುವೆಂಪು ಮಾನಸಪುತ್ರ ಇನ್ನಿಲ್ಲ
ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಥಗರ್ಭಿತ ಕೊಡುಗೆ ನೀಡಿದ ನಾಡೋಜ ದೇ. ಜವರೇಗೌಡ ನಮ್ಮನ್ನಗಲಿದ್ದಾರೆ. ಕುವೆಂಪು ಅವರಿಂದ ಮಾನಸ ಪುತ್ರ ಎಂದೇ ಕರೆಸಿಕೊಂಡಿದ್ದ ದೇಜಗೌ, ನಾಡು ಕಂಡ ಶ್ರೇಷ್ಠ ಸಾಹಿತಿ. ಇವರ ಅಂತ್ಯದ ಮೂಲಕ ಕುವೆಂಪು ಶಿಷ್ಯರ ಕೊಂಡಿಯೊಂದು ಕಳಚಿದಂತಾಗಿದೆ. 98ರ ಹರದಯದಲ್ಲಿ ನಿನ್ನೆ ಸಾವನ್ನಪ್ಪಿದ ದೇಜಗೌ ಅವರಿಗೊಂದು ನುಡಿನಮನ.
ದೇ. ಜವರೇಗೌಡರು ಕನ್ನಡದ ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರಲ್ಲಿ ಒಬ್ಬರು. ಕೇವಲ ಸಾಹಿತಿಯಾಗಿ ಉಳಿಯದೆ ಭಾಷೆ, ಸಂಸ್ಕೃತಿಯ ಉಳಿವಿಗೆ ದುಡಿದವರು. ಸುಮಾರು ಏಳು ದಶಕಗಳಿಂದ ವಿದ್ವತ್ತು, ಆಡಳಿತ ಮತ್ತು ಚಳವಳಿಗಳೆಂಬ ಮೂರು ನೆಲೆಗಳಲ್ಲಿ ಮಾಡಿರುವ ಕೆಲಸಗಳು ಅವರ ಕೊಡುಗೆಯ ಸ್ವರೂಪವನ್ನು ನಿರ್ಧರಿಸಿವೆ.
ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದಾದುದು. ಇದಕ್ಕಾಗಿ ಸುಮಾರು ಐದು ಬಾರಿ ಧರಣಿ ಕುಳಿತಿದ್ದರು. ಕನ್ನಡ ಆಡಳಿತ ಭಾಷೆಯಾಗಬೇಕು; ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ, ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು.
ದೇಜಗೌ ಅವರ ಮಾತು ಬರಹ ಎರಡೂ ಓತಪ್ರೋತ. 2-3 ಗಂಟೆಯವರೆಗೆ ನಿರರ್ಗಳವಾಗಿ ಮಾತನಾಡುವ ಕೌಶಲ್ಯ ಅವರಲ್ಲಿತ್ತು. ಜಾನಪದ, ಗ್ರಂಥ ಸಂಪಾದನೆ, ಸಾಹಿತ್ಯ ವಿಮರ್ಶೆ, ಭಾಷಾಂತರ, ಜೀವನಚರಿತ್ರೆ, ಪ್ರವಾಸ ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ವ್ಯಾಪಕವಾದ ಕೆಲಸ ಮಾಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗಾಗಿ ಹತ್ತಾರು ಮಹತ್ವದ ಯೋಜನೆಗಳನ್ನು ರೂಪಿಸಿದ, ಸಂಪನ್ಮೂಲಗಳನ್ನು ಸೃಷ್ಟಿಸಿ, ಅವನ್ನು ಯಶಸ್ವಿಯಾಗಿ ನಿರ್ವಹಿಸಿದ ದೇಜಗೌ ಸಾಧನೆ ಅನುಪಮವಾದುದು.
‘ಕುವೆಂಪು ವಿದ್ಯಾವರ್ಧಕ ಟ್ರಸ್ಟ್’ ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಪ್ರಗಲ್ಭ ಪಾಂಡಿತ್ಯ ಹೊಂದಿದ್ದ ಇವರು ಸುಮಾರು 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದ ಇವರು, ಅನುವಾದಕರಾಗಿಯೂ ಹೆಸರು ಮಾಡಿದ್ದಾರೆ. ಕನ್ನಡಕ್ಕೆ ಎಲ್ಲೇ ಸಮಸ್ಯೆಗಳು ಉದ್ಭವಿಸಿದರೂ 98ರ ಇಳಿವಯಸ್ಸಿನಲ್ಲೂ ದೇಜಗೌ ಹಾಜರಿರುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ.
ಅಧ್ಯಯನ, ಪರಿಶ್ರಮ, ದೊಡ್ಡವರ ಸಹವಾಸದಿಂದಲೇ ಮೇರುಸದೃಶ ವ್ಯಕ್ತಿತ್ವವನ್ನು ಅವರು ಹೊಂದಿದ್ದರು. ನಿರಂತರ ಅನ್ವೇಷಣೆಯೇ ಅವರ ಕೆಲಸವಾಗಿತ್ತು.
ಶೈಕ್ಷಣಿಕ ಸಾಧನೆ:
ರಾಷ್ಟ್ರಕವಿ ಕುವೆಂಪು ಅವರಿಂದ ಪ್ರಭಾವಿತರಾಗಿ,ಮೈಸೂರಿನಲ್ಲಿ ಕನ್ನಡ ಎಂ.ಎ. ಪದವಿ ಪಡೆದು 1946ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ, ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು, ಅನೇಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಪ್ರಕಟಣೆ ವಿಭಾಗದ ಕಾರ್ಯದರ್ಶಿ, ಸಹಾಯಕ ಪ್ರಾಧ್ಯಾಪಕ, ಪರೀಕ್ಷೆಗಳ ನಿಯಂತ್ರಣಾಧಿಕಾರಿ, ಪ್ರಾಧ್ಯಾಪಕರು, ವಿಭಾಗದ ಮುಖ್ಯಸ್ಥರು, ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಮುಂತಾದವು ಅವುಗಳಲ್ಲಿ ಕೆಲವು. 1969ರಿಂದ 75ರವರೆಗೆ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ತಮ್ಮ ಕನ್ನಡಪರವಾದ ರಚನಾತ್ಮಕ ಚಟುವಟಿಕೆಗಳನ್ನು ಆರು ವರ್ಷಗಳ ಕಾಲ ಮುಂದುವರೆಸಿದವರು.
ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬೆಳವಣಿಗೆಯಲ್ಲಿ ಇವರ ಪಾತ್ರ ತುಂಬಾ ಹಿರಿದಾದುದು. 1966ರಲ್ಲಿ ಜಾನಪದವನ್ನು ಕನ್ನಡ ತರಗತಿಗಳಲ್ಲಿ ವಿಶೇಷ ಅಧ್ಯಯನವಾಗಿ ಅಳವಡಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಜಾನಪದ ವಸ್ತು ಸಂಗ್ರಹಾಲಯದ ಅಭಿವೃದ್ದಿಗೆ ನೆರವಾದವರು. ಇವರ ಜಾನಪದ ಸೇವೆ ಗಮನಿಸಿ ಕರ್ನಾಟಕ ವಿಶ್ವವಿದ್ಯಾನಿಲಯದ ಮೂರನೆಯ ಜಾನಪದ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆರಿಸಿತು.
ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕೆಲಸಗಳನ್ನು ಮಾಡಿದವರು; ನಿವೃತ್ತಿಯ ನಂತರವೂ ಅಂತಹುದೇ ಕೆಲಸಗಳಲ್ಲಿ ತೊಡಗಿಸಿಕೊಂಡವರು. ದೇಜಗೌ ಅವರೇ ಪ್ರಾರಂಭಿಸಿ, ಯಶಸ್ವಿಯಾಗಿ ನಿರ್ವಹಿಸಿದ ‘ಕನ್ನಡ ವಿಶ್ವಕೋಶ’, ‘ವಿಷಯ ವಿಶ್ವಕೋಶ-ಕರ್ನಾಟಕ’, ‘ಇಂಗ್ಲಿಷ್-ಕನ್ನಡ ನಿಘಂಟು’, ‘ಸಮಗ್ರ ಕನ್ನಡ ಸಾಹಿತ್ಯಚರಿತ್ರೆ ‘, ‘ಕನ್ನಡ ಛಂದಸ್ಸಿನ ಇತಿಹಾಸ’ ಮುಂತಾದ ಕೆಲವು ಮುಖ್ಯವಾದ ಯೋಜನೆಗಳು ಗಮನಾರ್ಹವಾದವುಗಳು. ಕರ್ನಾಟಕಲ್ಲೇ ಮೊದಲಬಾರಿಗೆ ‘ಜಾನಪದ ವಸ್ತುಸಂಗ್ರಹಾಲ’ಯವನ್ನು ಸ್ಥಾಪಿಸಿ ಜಾನಪದ ಅಧ್ಯಯನಕ್ಕೆ ತಳಹದಿಯನ್ನು ರೂಪಿಸಿಕೊಟ್ಟಿದ್ದು ಅವರ ಮುಖ್ಯವಾದ ಹೆಗ್ಗಳಿಕೆ.
ಅವರು ವಿಶ್ವವಿದ್ಯಾಲಯದಲ್ಲಿ ಅನೇಕ ಹೊಸ ವಿಭಾಗಗಳನ್ನು ಪ್ರಾರಂಭಿಸಿದರು. ಬದುಕಿನ ಕೊನೆತನಕವೂ ‘ಕುವೆಂಪು ವಿದ್ಯಾವರ್ಧಕ ಟ್ರಸ್ಟ್’ ಮೂಲಕ ಕನ್ನಡಪರವಾದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ. ಜವರೇಗೌಡರು, ವಿವಿಧ ಪ್ರಕಾರಗಳಲ್ಲಿ 135 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.
ಗೌರವ, ಪುರಸ್ಕರಗಳ ಸರಮಾಲೆ
* 1975ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್,
* ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ,
* ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ,
* ತಿರುವನಂತಪುರದ ‘ದ್ರಾವಿಡಿಯನ್ ಲಿಂಗ್ವಿಸ್ಟಿಕ್ಸ್ ಅಸೋಸಿಯೇಶನ್’ನ ಸೀನಿಯರ್ ಫೆಲೋ ಪ್ರಶಸ್ತಿ,
* 1998ರಲ್ಲಿ ಕರ್ನಾಟಕ ಸರ್ಕಾರದ ಪಂಪ ಪ್ರಶಸ್ತಿ
* ಕನ್ನಡ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ನೃಪತುಂಗ ಪ್ರಶಸ್ತಿ.
* 2008ರ ಕರ್ನಾಟಕ ರತ್ನ ಪ್ರಶಸ್ತಿ.
* 1970ರಲ್ಲಿ ಬೆಂಗಳೂರಿನಲ್ಲಿ ನಡೆದ 47ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ
* ಹಂಪಿ ಕನ್ನಡ ವಿವಿಯಿಂದ ನಾಡೋಜ ಪುರಸ್ಕಾರ.
* ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಜಾರಿಯಾಗಲೇಬೇಕೆಂದು ಸರಕಾರದ ಮೇಲೆ ಸಾಕಷ್ಟು ಒತ್ತಡ ಹಾಕಿದ ಮೊದಲಿಗರು.
* ಸರೋಜಿನಿ ಮಹಿಷಿ ವರದಿ ಜಾರಿಗೆ ಹೋರಾಟ.
* ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 30 ನಿಮಿಷಗಳ ಸಾಕ್ಷ್ಯಚಿತ್ರ ನಿರ್ಮಾಣ
...............................

No comments:
Post a Comment