ನೆನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಕಾಗೋಡು ಅವಧಿಯಲ್ಲಿ ಸಿಕ್ಕೀತೇ ಕಾಯಕಲ್ಪ?
ಕಾಗೋಡು ತಿಮ್ಮಪ್ಪ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ. ಸಚಿವರಾದ ನಂತರ ನಾಳೆ ಪ್ರಥಮ ಬಾರಿಗೆ ಜಿಲ್ಲೆಗೆ ಬರಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದಿರುವ ಕೆಲವು ಪ್ರಮುಖ ಯೋಜನೆಗಳ ಬಗ್ಗೆ ನೆನಪು ಮಾಡಿಕೊಡುವ ಒಂದು ಯತ್ನ. ಕಾಗೋಡು ಜಿಲ್ಲೆಯವರೇ ಆಗಿರುವುದರಿಂದ ಮತ್ತು ಈ ಹಿಂದೆಯೂ ಉಸ್ತುವಾರಿ ಸಚಿವರಾಗಿರುವುದರಿಂದ ಜಿಲ್ಲೆಯ ಎಲ್ಲ ಸಮಸ್ಯೆಗಳ ಬಗ್ಗೆ ಅರಿವಿದೆ. ಕೆಲವು ಯೋಜನೆಗಳು ಅನುಷ್ಠಾನಗೊಂಡು ಅರ್ಧಕ್ಕೆ ಸ್ಥಗಿತಗೊಂಡಿದ್ದರೆ, ಮತ್ತೆ ಕೆಲವು ಘೋಷಿತ ಯೋಜನೆಗಳು ಇಲ್ಲಿಯವರೆಗೂ ಕಾರ್ಯಗತವೇ ಗೊಂಡಿಲ್ಲ. ನಗರಕ್ಕೆ ಸಂಬಂಧಿಸಿದ ಮಹತ್ವದ ಯೋಜನೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ವಿಶೇಷ ಆಸಕ್ತಿ ವಹಿಸಬೇಕು. ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಕಲೆ ಹಾಕಬೇಕು. ಮುಖ್ಯಮಂತ್ರಿಗಳು ಸೇರಿದಂತೆ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ, ತಮ್ಮ ಅವಧಿಯಲ್ಲಿ ಈ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂಬುವುದು ಜಿಲ್ಲೆಯ ನಾಗರಿಕರ ಆಗ್ರಹ.
ಕೇಂದ್ರ ಸರ್ಕಾರದ ಪ್ರತಿಷ್ಠಿತ ’ಸ್ಮಾರ್ಟ್ ಸಿಟಿ’ ಹಾಗೂ ’ಅಮೃತ್’ ಯೋಜನೆಗಳಡಿ ಸ್ಥಾನ ಪಡೆದುಕೊಳ್ಳುವ ಮೂಲಕ ಶಿವಮೊಗ್ಗ ನಗರ ಇಡೀ ದೇಶದ ಗಮನ ಸೆಳೆದಿದೆ. ಆದರೆ ನಗರಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ, ಜನೋಪಯೋಗಿ ಯೋಜನೆಗಳು ನಾನಾ ಕಾರಣಗಳಿಂದ ನೆನೆಗುದಿಗೆ ಬಿದ್ದಿವೆ. ಇದು ನಗರದ ಬೆಳವಣಿಗೆ ಹಾಗೂ ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿದ್ದು, ನೂತನ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಈ ಯೋಜನೆಗಳ ಅನುಷ್ಠಾನಕ್ಕೆ ಚಿತ್ತ ಹರಿಸಬೇಕಾಗಿದೆ.
ವಿಮಾನ ನಿಲ್ದಾಣ:
ಹೊರವಲಯ ಸೋಗಾನೆ ಬಳಿ ನಿರ್ಮಿಸುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯು ಅಕ್ಷರಶಃ ಹಳ್ಳ ಹಿಡಿದಿದೆ ಎಂದರೇ ತಪ್ಪಾಗಲಾರದು. ಈಗಾಗಲೇ ಕಾಮಗಾರಿಗೆ ನೂರಾರು ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತ ತಾಂತ್ರಿಕ ಕಾರಣ, ಸರ್ಕಾರದ ನಿರ್ಲಕ್ಷ್ಯದಿಂದ ಕಾಮಗಾರಿ ಸ್ಥಗಿತಗೊಂಡಿದೆ. ಪ್ರಸ್ತುತ ನಡೆಸಲಾಗಿರುವ ಕೆಲಸ ಕೂಡ ಹಾಳಾಗುತ್ತಿದೆ. ಸದ್ಯದ ಸ್ಥಿತಿಗತಿ ಗಮನಿಸಿದರೆ ಯೋಜನೆ ಟೇಕಾಫ್ ಆಗುವ ಯಾವುದೇ ಲಕ್ಷಣಗಳು ಗೋಚರವಾಗುತ್ತಿಲ್ಲವಾಗಿದೆ.
ಈ ಹಿಂದೆ ಕೇಂದ್ರ ವಿಮಾನಯಾನ ಪ್ರಾಧಿಕಾರಕ್ಕೆ ಕಾಮಗಾರಿ ಹಸ್ತಾಂತರಿಸುವ ಚರ್ಚೆಯಿತ್ತು. ಕೇಂದ್ರ ವಿಮಾನಯಾನ ರಾಜ್ಯ ಸಚಿವರು ಕೂಡ ಶಿವಮೊಗ್ಗಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದರು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಸುಪರ್ದಿಗೆವಹಿಸಿದರೆ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದರು. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಇಲ್ಲಿಯವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮತ್ತೊಂದೆಡೆ ಖಾಸಗಿ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಕೈಗೆತ್ತಿಕೊಳ್ಳುವ ಚಿಂತನೆ ಕೂಡ ಸರ್ಕಾರ ನಡೆಸುತ್ತಿದೆ.
ಹೊರವರ್ತುಲ ರಸ್ತೆ:
ನಗರದ ಭವಿಷ್ಯದ ಬೆಳವಣಿಗೆ, ವಾಹನ ಸಂಚಾರ ಗಮನದಲ್ಲಿಟ್ಟುಕೊಂಡು ಗುಜರಾತ್ ರಾಜ್ಯದ ಅಹಮದಬಾದ್ ಮಾದರಿಯಲ್ಲಿ 200 ಅಡಿ ಹೊರವರ್ತುಲ ರಸ್ತೆ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ 400 ಕೋಟಿ ರೂ. ಅನುದಾನ ಕೂಡ ಮೀಸಲಿರಿಸಲಾಗಿತ್ತು. ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ರಸ್ತೆ ಹಾದು ಹೋಗುವ ಸ್ಥಳಗಳ ಸರ್ವೇ ಪೂರ್ಣಗೊಳಿಸಿದೆ. ನಗರಾಭಿವೃದ್ದಿ ಪ್ರಾಧಿಕಾರದ ಮಹಾಯೋಜನೆಯಲ್ಲಿಯೂ ಅನುಮೋದಿಸಲಾಗಿದೆ.
ಆದರೆ ಇಲ್ಲಿಯವರೆಗೂ ಹೊರವರ್ತುಲ ರಸ್ತೆ ನಿರ್ಮಾಣ ಯೋಜನೆ ಕಾರ್ಯಗತಗೊಂಡಿಲ್ಲ. ಪ್ರಸ್ತುತ ಈ ಯೋಜನೆಯ ಅಂದಾಜು ವೆಚ್ಚ 1000 ಕೋಟಿ ರೂ.ಗಳ ಗಡಿ ದಾಟುವುದರಿಂದ ಸರ್ಕಾರ ಈ ಯೋಜನೆಯ ಅನುಷ್ಠಾನದತ್ತ ಗಮನಹರಿಸುವ ಗೋಜಿಗೆ ಹೋಗುತ್ತಿಲ್ಲ. ಮತ್ತೊಂದೆಡೆ ಲೋಕಸಭಾ ಸದಸ್ಯ ಬಿ.ಎಸ್.ಯಡಿಯೂರಪ್ಪರವರು ಈ ಯೋಜನೆಯನ್ನು ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಅನುಷ್ಠಾನಗೊಳಿಸುವುದಾಗಿ ಹೇಳಿದ್ದರು. ಆದರೆ ಇಲ್ಲಿಯವರೆಗೂ ಈ ಪ್ರಕ್ರಿಯೆಯೇ ಆರಂಭವಾಗಿಲ್ಲ.
ಸರ್ಕಾರಿ ಸಿಟಿ ಬಸ್:
ಈ ಹಿಂದಿನ ಕೇಂದ್ರ ಯುಪಿಎ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ ನಗರದಲ್ಲಿ 65 ಸರ್ಕಾರಿ ಸಿಟಿ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬಸ್‌ಗಳ ಖರೀದಿಗೆ, ಪ್ರತ್ಯೇಕ ಬಸ್ ಟರ್ಮಿನಲ್, ಡಿಪೋ, ವರ್ಕ್‌ಶಾಪ್‌ಗೆ ಅಗತ್ಯವಾದ ಅನುದಾನ ಕೂಡ ಬಿಡುಗಡೆ ಮಾಡಿದೆ. ಆದರೆ ಜಿಲ್ಲಾಡಳಿತ ಹಾಗೂ ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ ನಿರ್ಲಕ್ಷ್ಯದಿಂದ ಇಲ್ಲಿಯವರೆಗೂ ನಗರದಲ್ಲಿ ಸರ್ಕಾರಿ ಸಿಟಿ ಬಸ್‌ಗಳ ಸಂಚಾರ ಆರಂಭವಾಗಿಲ್ಲ.
ಈಗಾಗಲೇ ಈ ಯೋಜನೆಯಡಿ ಭದ್ರಾವತಿಯಲ್ಲಿ ಬಸ್ ಟರ್ಮಿನಲ್, ಡಿಪೋ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಡಿಪೋ ನಿರ್ಮಾಣಕ್ಕೆ ಜಿಲ್ಲಾಡಳಿತ ಗುರುತು ಮಾಡಿರುವ ಜಾಗವನ್ನು ಇಲ್ಲಿಯವರೆಗೂ ಕೆ.ಎಸ್.ಆರ್.ಟಿ.ಸಿ. ಸಂಸ್ಥೆ ತನ್ನ ಸುಪರ್ದಿಗೆ ತೆಗೆದುಕೊಂಡಿಲ್ಲ. ಪ್ರತ್ಯೇಕ ಬಸ್ ಟರ್ಮಿನಲ್, ಡಿಪೋ ಕಟ್ಟಡ ನಿರ್ಮಾಣ ಕಾಮಗಾರಿ ಇಲ್ಲಿಯವರೆಗೂ ಆರಂಭವಾಗಿಲ್ಲ. ಲಕ್ಷಾಂತರ ನಾಗರಿಕರಿಗೆ ಅನುಕೂಲವಾಗುವ ಯೋಜನೆ ನೆನೆಗುದಿ ಬೀಳುವ ಹಂತದಲ್ಲಿದೆ.
ರಸ್ತೆ ಅಗಲೀಕರಣ:
ದಿನದಿಂದ ದಿನಕ್ಕೆ ನಗರದಲ್ಲಿ ಜನ-ವಾಹನ ಸಂಚಾರ ಹೆಚ್ಚಾಗುತ್ತಿದೆ. ಪ್ರಮುಖ ರಸ್ತೆಗಳ ಅಗಲೀಕರಣ, ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆಸುವುದು ತುರ್ತು ಅಗತ್ಯವಾಗಿದೆ. ಆದರೆ ಅನುದಾನದ ಕೊರತೆಯಿಂದ ರಸ್ತೆಗಳ ಅಗಲೀಕರಣ-ಮೇಲ್ದರ್ಜೆಗೇರಿಸುವ ಪ್ರಕ್ರಿಯೆಗೆ ಹಿನ್ನಡೆಯಾಗಿದೆ. ಕೆಲ ರಸ್ತೆಗಳ ಅಗಲೀಕರಣಕ್ಕೆ ಸೂಕ್ತ ಅನುದಾನ ಕೋರಿ ಜಿಲ್ಲಾಡಳಿತವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಮಾಹಿತಿಯಿದ್ದು, ಸಂಬಂಧಿಸಿದ ಇಲಾಖಾ ಸಚಿವರು ಮಾತ್ರ ಇತ್ತ ಗಮನಹರಿಸಿಲ್ಲ.
ಇನ್ನೂ ಎರಡು ಹೊಸ ಪೊಲೀಸ್ ಠಾಣೆಗಳ ಮಂಜೂರು, ಕೃಷಿ ವಿಶ್ವ ವಿದ್ಯಾಲಯ ಹಾಗೂ ಪಶು ವೈದ್ಯಕೀಯ ವಿದ್ಯಾಲಯಕ್ಕೆ ಅನುದಾನ, ರೈಲ್ವೆ ನಿಲ್ದಾಣದ ಬಳಿಯ ಹೊರವರ್ತುಲ ರಸ್ತೆ ವಿವಾದ ಪರಿಹಾರ, ಕೇಂದ್ರ-ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವ ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ನಿರ್ಮಾಣ ಮತ್ತು ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಪಾಲಿನೆ ಅನುದಾನ ದೊರಕಿಸಿಕೊಡುವುದು, ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸುವುದು ಸೇರಿದಂತೆ ಹತ್ತು ಹಲವು ಮಹತ್ವದ ಯೋಜನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಿ ಪರಿಹಾರ ಕಲ್ಪಿಸಲಿದ್ದಾರೆಯೇ ಎಂಬುವುದನ್ನು ಕಾದು ನೋಡಬೇಕಾಗಿದೆ.