ಬರಪೀಡಿತ ತಾಲೂಕು ಆಯ್ಕೆಯಲ್ಲಿ ‘ಕೈ’ವಾಡ
ನಿಜಕ್ಕೂ ಬರಪೀಡಿತ ತಾಲೂಕುಗಳ ಆಯ್ಕೆ ಸಮರ್ಪಕವಾಗಿ ನಡೆದಿಲ್ಲ. ಅಧಿಕಾರಿಗಳು ಸಲ್ಲಿಸಿದ ವರದಿ ತಪ್ಪಾಗಿದೆಯೋ ಅಥವಾ ರಾಜಕಾರಣಿಗಳ ಕೈ ಮೇಲಾಗಿದೆಯೋ ಗೊತ್ತಾಗುತ್ತಿಲ್ಲ. ಕಳೆದ ವರ್ಷ ಬರದಿಂದ ತತ್ತರಿಸಿದ್ದ ಸೊರಬವನ್ನೂ ಕೈ ಬಿಡಲಾಗಿದೆ. ಶಿಕಾರಿಪುರವೂ ಹಿಂದಿನ ವರ್ಷವೇ ಆಯ್ಕೆಯಾಗಬೇಕಿತ್ತು. ಈ ವರ್ಷವೂ ಆಯ್ಕೆಯಾಗಿಲ್ಲ. ಬಪೀಡಿತ ತಾಲೂಕುಗಳ ಆಯ್ಕೆಯಲ್ಲಿಯೇ ತಾರತಮ್ಯ ನಡೆದರೆ ಇನ್ನು ಬರ ಕಾಮಗಾರಿ, ಹಣಬಿಡುಗಡೆಯಲ್ಲಿ ಎಷ್ಟು ವ್ಯತಾಸವಾಗಬಹುದು?
ಬರ ಪೀಡಿತ ತಾಲೂಕುಗಳ ಆಯ್ಕೆ ಪ್ರಕ್ರಿಯೆಯನ್ನು ನ್ಯಾಯ ಸಮ್ಮತವಾಗಿ ಅಧಿಕಾರಿಗಳ ಮೂಲಕ ಪರಿಶೀಲನೆ ನಡೆಸಬೇಕು. ಆದರೆ ತಾಲೂಕುಗಳ ಆಯ್ಕೆಯಲ್ಲಿ ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿರುವುದು ಸರಿಯಲ್ಲ. ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಬೇಸರದ ಸಂಗತಿ.
- ಶಾಸಕಿ ಶಾರದಾ ಪೂರ್ಯನಾಯ್ಕ್
ರಾಜ್ಯ ಸರ್ಕಾರ ಪ್ರಕಟಿಸಿರುವ ಬರ ಪೀಡಿತ ತಾಲೂಕು ಪಟ್ಟಿಯಲ್ಲಿ ಜಿಲ್ಲೆಯ ಮೂರು ತಾಲೂಕುಗಳು ಮಾತ್ರ ಸ್ಥಾನ ಪಡೆದುಕೊಂಡಿದ್ದು, ಉಳಿದ ನಾಲ್ಕು ತಾಲೂಕುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಇಲಾಖೆ ಸಚಿವ ಕಾಗೋಡು ತಿಮ್ಮಪ್ಪ ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಶಿಕಾರಿಪುರ ತಾಲೂಕುಗಳನ್ನು ಬರ ಪೀಡಿತವೆಂದು ಘೋಷಿಸಬೇಕು
ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜ್ಯೋತಿ ಕುಮಾರ್.
ಜಿಲ್ಲೆಯ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಅಥವಾ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಜಿಲ್ಲಾಡಳಿತದಿಂದ ಯಾವುದೇ ಮಾಹಿತಿಯನ್ನು ಕಳುಹಿಸಿಲ್ಲ. ರಾಜ್ಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಅಂಕಿಸಂಖ್ಯೆಗಳನ್ನು ಆಧರಿಸಿ ರಾಜ್ಯಸರ್ಕಾರವು ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಪ್ರಕಟಿಸಿದೆ. ಇದರಲ್ಲಿ ಜಿಲ್ಲಾಡಳಿತದ ಯಾವುದೇ ಪಾತ್ರವಿಲ್ಲ.ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದು ಮಾಧ್ಯಮಗಳ ಮುಖಾಂತರ ಗೊತ್ತಾಗಿದೆ.
- ಚನ್ನಬಸಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ
ಯಾವ ತಾಲೂಕು ನಿಜವಾಗಿ ಬರಗಾಲಪೀಡಿತ ಎಂದು ಘೋಷಿತವಾಗಬೇಕಿತ್ತೋ ಅದು ಘೋಷಿತವಾಗಿಲ್ಲ. ಯಾವುದನ್ನು ಘೋಷಣೆ ಮಾಡದಿದ್ದರೂ ತೊಂದರೆ ಇಲ್ಲವಾಗಿತ್ತೋ ಅವು ಬರಗಾಲಪೀಡಿತ ಎಂದು ಘೋಷಣೆಯಾಗಿವೆ. ಇದು ಜಿಲ್ಲೆಯ ಬರಗಾಲಪೀಡಿತ ತಾಲೂಕುಗಳ ಪಟ್ಟಿಯಲ್ಲಾದ ವಿಚಿತ್ರತೆ. ಮಲೆನಾಡಿನ ಸಾಗರ, ಹೊಸನಗರ, ತೀರ್ಥಹಳ್ಳಿ ಬರಗಾಲಪೀಡಿತವಂತೆ. ಅರೆಮಲೆನಾಡಿನ ಭದ್ರಾವತಿ, ಶಿಕಾರಿಪುರ ಮತ್ತು ಸೊರಬದಲ್ಲಿ ಬರವಿಲ್ಲವಂತೆ. ಯಾವ ಅಧಿಕಾರಿ ಈ ರೀತಿ ವರದಿ ಕೊಟ್ಟಿದ್ದಾರೋ ಗೊತ್ತಿಲ್ಲ. ಆದರೆ ಜನರಂತೂ ಜಿಲ್ಲೆಯವರೇ ಆದ ಕಂದಾಯ ಸಚಿವರನ್ನು ಕಾಂಗ್ರೆಸ್ ಶಾಸಕರಿರುವ ತಾಲೂಕಿನಲ್ಲಿ ಮಾತ್ರ ಬರ ಕಾಣಿಸಿಕೊಂಡಿದೆಯೇ ಎಂದು ಪ್ರಶ್ನಿಸಲಾರಂಭಿಸಿದ್ದಾರೆ.
ವಿಶೇಷವೆಂದರೆ, ಇತ್ತೀಚೆಗೆ ಜರುಗಿದ ಜಿಪಂ ಸಭೆಯಲ್ಲಿ ಇಡಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ನಿರ್ಣಯ ಮಾಡಲಾಗಿತ್ತು. ಆದರೆ ಆಗಿದ್ದೇ ಬೇರೆ. ಕಳೆದ ವರ್ಷ ಬರಪೀಡಿತ ಎಂದು ಘೋಷಿತವಾಗಿದ್ದ ಸೊರಬವನ್ನೂ ಈ ಬಾರಿ ಕೈಬಿಡಲಾಗಿದೆ. ಇದರ ಜೊತೆ ಕಳೆದ ಸಲವೇ ಬರಪಟ್ಟಿ ಸೇರಬೇಕಿದ್ದ ಶಿಕಾರಿಪುರಕ್ಕೂ ಈ ಬಾರಿ ಸ್ಥಾನ ಕಲ್ಪಿಸಿಲ್ಲ. ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಕೊರತೆ ಕಂಡಿರುವ ತಾಲುಕುಗಳು ಇವೆರಡು. ಬರಪೀಡಿತವೆಂದು ಘೋಷಿಸಿರುವ ಸಾಗರ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕುಗಳಲ್ಲಿ ಬಿದ್ದಿರುವಷ್ಟು ಮಳೆಯು ಸೊರಬ, ಶಿಕಾರಿಪುರ, ಭದ್ರಾವತಿ ಹಾಗೂ ಶಿವಮೊಗ್ಗ ತಾಲೂಕುಗಳಲ್ಲಿ ಆಗಿಲ್ಲ. ರೈತರ ಪರಿಸ್ಥಿತಿಯಂತೂ ಹೇಳತೀರದಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೊದಲು ಈ ತಾಲೂಕುಗಳನ್ನು ಬರ ಪೀಡಿತವೆಂದು ಸರ್ಕಾರ ಘೋಷಿಸಬೇಕಾಗಿತ್ತು.
ಪ್ರಸ್ತುತ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ಮಳೆಯ ತೀವ್ರ ಕೊರತೆ ಉಂಟಾಗಿದೆ. ಎಲ್ಲ ತಾಲೂಕುಗಳಲ್ಲಿಯೂ ವಾಡಿಕೆಯ ಮಳೆಯಾಗಿಲ್ಲ. ಪ್ರಮುಖ ಜಲಾಶಯ, ಕೆರೆಕಟ್ಟೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗಿಲ್ಲ. ಇದರಿಂದ ಕೃಷಿ ಚಟುವಟಿಕೆಯ ಮೇಲೆ ಗಂಭೀರ ಪರಿಣಾಮ ಉಂಟು ಮಾಡಿದೆ. ಎಲ್ಲ ತಾಲೂಕುಗಳಲ್ಲಿಯೂ ಬರಗಾಲದ ಕರಿಛಾಯೆ ಆವರಿಸಿದೆ. ಕಂದಾಯ ಇಲಾಖೆ ಸಚಿವ ಕಾಗೋಡು ತಿಮ್ಮಪ್ಪ ಜಿಲ್ಲೆಯವರೇ ಆಗಿದ್ದರಿಂದ ಹಾಗೂ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಅವರಿಗೆ ಮಾಹಿತಿಯಿರುವುದರಿಂದ ಇಡೀ ಜಿಲ್ಲೆಯನ್ನೇ ಬರ ಪೀಡಿತವೆಂದು ಘೋಷಿಸುವ ನಿರೀಕ್ಷೆ ಜಿಲ್ಲೆಯ ಜನಪ್ರತಿನಿಧಿ, ನಾಗರಿಕ ವಲಯದಲ್ಲಿತ್ತು.
ಬರಪೀಡಿತ ಪಟ್ಟಿಯಲ್ಲಿ ಸ್ಥಾನ ಪಡೆಯದ ನಾಲ್ಕು ತಾಲೂಕುಗಳ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಈಗ ಅಸಮಾಧಾನ ಮನೆ ಮಾಡಿದೆ. ಈ ತಾಲೂಕುಗಳ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಕೆಲವು ಸ್ಥಳೀಯ ಜನಪ್ರತಿನಿಧಿಗಳು ಕೂಡ ತಮ್ಮ ತಾಲೂಕು ಬರಪೀಡಿತ ಪಟ್ಟಿಯಲ್ಲಿ ಸ್ಥಾನ ಪಡೆಯದಿರುವುದಕ್ಕೆ ಪರೋಕ್ಷ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಚಿವ ಕಾಗೋಡು ಅವರನ್ನು ಭೇಟಿಯಾಗಿ ಚೆರ್ಚೆ ನಡೆಸಲು ನಿರ್ಧರಿಸಿದ್ದಾರೆ. ಮತ್ತೊಂದೆಡೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಇದೇ ವಿಷಯ ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ದ ಹೋರಾಟ ನಡೆಸುವ ಚಿಂತನೆ ನಡೆಸುತ್ತಿವೆ. ಈಗಾಗಲೇ ಸೊರಬ ಶಾಸಕ ಮಧು ಬಂಗಾರಪ್ಪ ಅವರು ಸೊರಬ ತಾಲೂಕು ಕೈಬಿಟ್ಟಿರುವ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಹರಿಹಾಯ್ದಿದ್ದಾರೆ. ಮೊದಲ ಪಟ್ಟಿಯಲ್ಲಿ ಈ ಎರಡೂ ತಾಲೂಕಿಗೆ ಸ್ಥಾನ ಸಿಗಬೇಕಿತ್ತು. ಆದರೆ ಹೊಸ ತಾಲೂಕನ್ನು ಸೇರಿಸುವ ಮೂಲಕ ರಾಜ್ಯ ಸರ್ಕಾರ ಅಥವಾ ಸಂಬಂಧಿತ ಇಲಾಖೆ ರಾಜಕೀಯ ಮಾಡಿದ್ದಂತೂ ಸತ್ಯ. ಅಧಿಕಾರಿಗಳು ಯಾರ ಓಲೈಕೆಗಾಗಿ ಈ ರೀತಿ ಮಾಡಿದ್ದಾರೆ ಅಥವಾ ಯಾರದ್ದಾದರೂ ಪ್ರಭಾವ ಇದರಲ್ಲಿದೆಯೇ ಎ್ನುವುದು ಜನರ ಪ್ರಶ್ನೆಯಾಗಿದೆ.
ಕಾಂಗ್ರೆಸ್ ಶಾಸಕರು ಪ್ರತಿನಿಧಿಸುತ್ತಿರುವ ಮೂರು ತಾಲೂಕುಗಳು ಬರ ಪೀಡಿತ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ತಾಲೂಕುಗಳ ಆಯ್ಕೆಯಲ್ಲಿಯೂ ರಾಜಕೀಯ ಮಾಡಲಾಗಿದೆ. ವಾಸ್ತವ ಸ್ಥಿತಿಗತಿಯ ಆಧಾರದ ಮೇಲೆ ತಾಲೂಕುಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಪ್ರತಿಪಕ್ಷದವರು ಮಾತನಾಡಲಾರಂಭಿಸಿದ್ದಾರೆ.
----------------------------------

No comments:
Post a Comment