ಬೇಸಿಗೆ ಆರಂಭಕ್ಕೂ ಮುನ್ನವೇ
ಎದುರಾಗಿದೆ ಜೀವಜಲಕ್ಕೆ ತತ್ವಾರ
ವಿದ್ಯುತ್ ಲೋಡ್ಶೆಡ್ಡಿಂಗ್ನಿಂದ ಮತ್ತಷ್ಟು ಸಮಸ್ಯೆ
ಒಂದೆಡೆ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ತಾಪಮಾನ ಹೆಚ್ಚಳದಿಂದ ಅಂತರ್ಜಲ ಬರಿದಾಗಿ ನೀರಿನ ಅಭಾವ ತಲೆದೋರಿದ್ದರೆ, ಮತ್ತೊಂದೆಡೆ ಅನಿಯಮಿತ ವಿದ್ಯುತ್ ಲೋಡ್ಶೆಡ್ಡಿಂಗ್ನಿಂದ ಹಲವು ಗ್ರಾಮಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಗ್ರಾಮೀಣ ಭಾಗದ ಜನರು ಜೀವಜಲಕ್ಕಾಗಿ ಪರಿತಪಿಸುವಂತಹ ದುಃಸ್ಥಿತಿ ನಿರ್ಮಾಣವಾಗಿದೆ.
ಪ್ರಸ್ತುತ ನಗರ-ಪಟ್ಟಣ ಪ್ರದೇಶಗಳಲ್ಲಿ ಬೇಕಾಬಿಟ್ಟಿಯಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಗ್ರಾಮೀಣ ಭಾಗಗಳಲ್ಲಂತೂ ಪರಿಸ್ಥಿತಿ ಹೇಳತೀರದಾಗಿದೆ. ಯಾವಾಗ ವಿದ್ಯುತ್ ಇರಲಿದೆ ಎಂಬುವುದೇ ಗೊತ್ತಾಗದ ಮಟ್ಟಕ್ಕೆ ಲೋಡ್ಶೆಡ್ಡಿಂಗ್ ಮಾಡಲಾಗುತ್ತಿದೆ. ಇದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವಂತಾಗಿದೆ. ಕೆಲ ಗ್ರಾಮಗಳಲ್ಲಿ ಸ್ಥಳಿಯಾಡಳಿತಗಳು ರಾತ್ರಿ ವೇಳೆ ನೀರು ಪೂರೈಕೆ ಮಾಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ.
ತತ್ಕ್ಷಣವೇ ಅನಿಯಮಿತ ವಿದ್ಯುತ್ ಲೋಡ್ಶೆಡ್ಡಿಂಗ್ ರದ್ದುಪಡಿಸಬೇಕು. ನಗರ-ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಬೇಕು. ಈ ಮೂಲಕ ವಿದ್ಯುತ್ ಕಡಿತದಿಂದ ನಾಗರೀಕರು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು.
ಇನ್ನೂ ಬೇಸಿಗೆ ಕಾಲ ಆರಂಭವಾಗಿಲ್ಲ. ಅದಾಗಲೇ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ! ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನ ಸುಮಾರು ಒಂಭತ್ತ್ತಕ್ಕೂ ಅಧಿಕ ಗ್ರಾಮಗಳಲ್ಲಿ ಅಂತರ್ಜಲ ಕುಸಿತದಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ನಡುವೆ ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಪಂಚಾಯ್ತಿ ಆಡಳಿತ ಅಗತ್ಯ ಕ್ರಮಕೈಗೊಂಡಿದೆ.
ಮುಂಗಾರು ಮಳೆ ಕೊರತೆ ಹಾಗೂ ಹೆಚ್ಚಾಗುತ್ತಿರುವ ಬಿಸಿಲ ಬೇಗೆಯಿಂದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಬೋರ್ವೆಲ್, ಬಾವಿ ಇತರೆ ಜಲಮೂಲಗಳ ಅಂತರ್ಜಲ ಮಟ್ಟ ಕುಸಿಯಲಾರಂಭಿಸಿದೆ. ಇದರಿಂದ ಚಳಿಗಾಲದ ಆರಂಭದಲ್ಲಿಯೇ ಜೀವ ಜಲಕ್ಕೆ ತತ್ವಾರ ಎದುರಾಗಲು ಮುಖ್ಯ ಕಾರಣವಾಗಿದೆ ಎಂದು ಜಿ. ಪಂ. ಆಡಳಿತ ಮೂಲಗಳು ಹೇಳುತ್ತವೆ.
’ಇತ್ತೀಚೆಗೆ ಶಿವಮೊಗ್ಗ ತಾಲೂಕಿನ ಕೊಮ್ಮನಾಳು, ಆಲ್ದಳ್ಳಿ, ಕುಂಸಿ, ಪುರದಾಳು ಗ್ರಾಮಗಳಲ್ಲಿ ಹಾಗೂ ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ, ಮೂಡಲ ಹಿತ್ಲಾಪುರ, ಮಾರಶೆಟ್ಟಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಈ ಗ್ರಾಮಗಳಲ್ಲಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಹೊಸದಾಗಿ ಬೋರ್ವೆಲ್ ಕೊರೆಯಿಸುವುದು ಸೇರಿದಂತೆ ಇತರೆ ಪರಿಹಾರ ಕಾರ್ಯ ನಡೆಸಲಾಗುತ್ತಿದೆ. ಲಭ್ಯವಿರುವ ಅನುದಾನ ಬಳಕೆ ಮಾಡಿಕೊಂಡು ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸ್ಥಳೀಯ ಗ್ರಾಮ ಪಂಚಾಯ್ತಿ ಆಡಳಿತಗಳಿಗೆ ನಿರ್ದೇಶನ ನೀಡಲಾಗದೆ’ ಎಂದು ಗ್ರಾಮೀಣ ಕುಡಿಯುವ ನೀರು ಹಾಗೂ ಸ್ವಚ್ಚತೆ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಎಂ.ಹರೀಶ್ ಹೇಳಿದ್ದಾರೆ.
’ಬೇಸಿಗೆ ಅವಧಿಯ ಏಪ್ರಿಲ್, ಮೇ ತಿಂಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿತ್ತು. ಆದರೆ ಈ ಬಾರಿ ಬೇಸಿಗೆ ಆರಂಭಕ್ಕೂ ಮುನ್ನವೆ ಕೆಲ ಗ್ರಾಮಗಳಲ್ಲಿ ಸಮಸ್ಯೆ ಸೃಷ್ಟಿಯಾಗಿದೆ. ಮಳೆಯ ತೀವ್ರ ಕೊರತೆ ಹಾಗೂ ಹೆಚ್ಚಾಗುತ್ತಿರುವ ತಾಪಮಾನದಿಂದ ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದೆ. ಪರಿಸ್ಥಿತಿ ನಿಭಾಯಿಸಲು ಎಲ್ಲ ರೀತಿಯ ಅಗತ್ಯ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ’ ಎಂದು ಎಸ್. ಎಂ. ಹರೀಶ್ ತಿಳಿಸಿದ್ದಾರೆ.
ತತ್ತರ: ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಪ್ರಸ್ತುತ ವರ್ಷ ವಾಡಿಕೆಯ ಮಳೆಯಾಗಿಲ್ಲ. ವರ್ಷಧಾರೆಯ ತೀವ್ರ ಕೊರತೆಯಿಂದ ಪ್ರಮುಖ ಜಲಾಶಯ, ಕೆರೆಕಟ್ಟೆಗಳು ಭರ್ತಿಯಾಗಿಲ್ಲ. ಮತ್ತೊಂದೆಡೆ ಕಳೆದ ಕೆಲ ವಾರಗಳಿಂದ ಜಿಲ್ಲೆಯಾದ್ಯಂತ ತಾಪಮಾನದ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡುಬಂದಿದೆ. ಇದರಿಂದ ಬೋರ್ವೆಲ್, ಕೆರೆಕಟ್ಟೆಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಅಂತರ್ಜಲ ಮಟ್ಟ ಕುಸಿಯಲಾರಂಭಿಸಿದೆ.
’ಮುಂಬರುವ ಬೇಸಿಗೆ ಸ್ಥಳೀಯಾಡಳಿತಗಳಿಗೆ ನಿಜಕ್ಕೂ ಸವಾಲಿನದ್ದಾಗಿದೆ. ಈಗಲೇ ಕುಡಿಯುವ ನೀರಿಗೆ ಹಲವು ಗ್ರಾಮಗಳಲ್ಲಿ ತತ್ವಾರ ಎದುರಾಗಿದೆ. ಬೇಸಿಗೆಯಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬಯಲು ಸೀಮೆಯ ಪ್ರದೇಶಗಳಲ್ಲಿ ಕಂಡುಬರುತ್ತಿದ್ದ ಹಾಹಾಕಾರ ಮಲೆನಾಡಿನ ಗ್ರಾಮಗಳಲ್ಲಿಯೂ ತಲೆದೋರುವ ಸಾಧ್ಯತೆ ದಟ್ಟವಾಗಿದೆ. ಮಳೆಯಾದರೆ ಪರಿಸ್ಥಿತಿ ಸುಧಾರಣೆಯಾಗಲಿದೆ. ಇಲ್ಲದಿದ್ದರೆ ಸಂಕಷ್ಟದ ದಿನಗಳು ಕಟ್ಟಿಟ್ಟ ಬುತ್ತಿಯಾಗಿದೆ’ ಎಂದು ಜಿ.ಪಂ.ನ ಹಿರಿಯ ಅಧಿಕಾರಿಯೋರ್ವರು ಅಭಿಪ್ರಾಯಪಡುತ್ತಾರೆ.
ಒಟ್ಟಾರೆ ಮಲೆನಾಡಿನಲ್ಲಿ ಬಯಲುಸೀಮೆಯ ವಾತಾವರಣ ಮನೆ ಮಾಡಿದೆ. ಕ್ರಮೇಣ ಬರಗಾಲದ ಬಿಸಿ ನಾಗರೀಕರಿಗೆ ತಟ್ಟಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಮಲೆನಾಡಿನ ಗ್ರಾಮಗಳು ತೀವ್ರ ಸ್ವರೂಪದ ಕುಡಿಯುವ ನೀರಿನ ಸಮಸ್ಯೆಗೆ ಸಿಲುಕುವ ಆತಂಕ ಎದುರಾಗಿರುವುದಂತೂ ಸತ್ಯವಾಗಿದೆ.
--------------------------------------------

No comments:
Post a Comment