ಹೋರಿ ಬೆದರಿಸುವ ಸ್ಪರ್ಧೆಗೆ ಅಂಕುಶ ಹಾಕುವವರಾರು?
ಅಪಾಯಕಾರಿ ಎಂದು ಗೊತ್ತಿದ್ದರೂ ಬಿಡಲೊಪ್ಪದ ಗ್ರಾಮಸ್ಥರು
* ಜಿಲ್ಲಾಡಳಿತಕ್ಕೆ ತಲೆನೋವಾದ ಸ್ಪರ್ಧೆ
ದೀಪಾವಳಿ ಹಬ್ಬ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ ವಿವಿಧೆಡೆ ’ಹೋರಿ ಬೆದರಿಸುವ’ ಸ್ಪರ್ಧೆಗಳಿಗೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ದೊಡ್ಡ ಪ್ರಮಾಣದ ಸ್ಪರ್ಧೆಗಳು ಕೂಡ ಆಯೋಜನೆ ಮಾಡಲಾಗುತ್ತಿದೆ. ಇದರ ಜೊತೆಗೆ ಹಲವೆಡೆ ಅವಘಡಗಳು ಸಂಭವಿಸಿರುವ ಮಾಹಿತಿಗಳು ಕೂಡ ವರದಿಯಾಗಿವೆ. ಮತ್ತೊಂದೆಡೆ, ಈ ಸ್ಪರ್ಧೆಯು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ.
ಶಿಕಾರಿಪುರ ಹಾಗೂ ಶಿವಮೊಗ್ಗ ತಾಲೂಕಿನಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಓರ್ವ ಮೃತಪಟ್ಟು, ಐದಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಬೇಗೂರು ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಮಲ್ಲೇಶ್ (34) ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಶಿವಮೊಗ್ಗ ತಾಲೂಕಿನ ಕುಂಸಿ ಹಾಗೂ ಹಾರ್ನಳ್ಳಿ ಗ್ರಾಮಗಳಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿತದಿಂದ ಐದರಿಂದ ಆರು ಜನರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಗಾಯಾಳುಗಳನ್ನು ಆಯನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ದೀಪಾವಳಿ ಹಬ್ಬದ ನಂತರ ಜಿಲ್ಲೆಯ ಶಿವಮೊಗ್ಗ, ಶಿಕಾರಿಪುರ, ಸಾಗರ, ಸೊರಬ ಹಾಗೂ ಕೆಲವು ತಾಲೂಕುಗಳಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಶಿಕಾರಿಪುರ ತಾಲೂಕಿನಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಈ ಸ್ಪರ್ಧೆಗಳು ನಡೆಯುತ್ತವೆ. ಹೋರಿಯನ್ನು ಹಿಡಿದು ಅದರ ಕೊರಳಲ್ಲಿ ಕಟ್ಟಿದ ವಸ್ತುವನ್ನು ಬಿಚ್ಚುವಲ್ಲಿ ಯಶಸ್ವಿಯಾಗುವವರಿಗೆ ಬಹುಮಾನ ನೀಡಲಾಗುತ್ತದೆ. ಹೋರಿ ಹಿಡಿಯಲು ಯಾರೊಬ್ಬರಿಗೂ ಸಾಧ್ಯವಾಗದಿದ್ದರೆ ಅಂತಹ ಹೋರಿಯ ಮಾಲಕರಿಗೂ ಬಹುಮಾನ ಕೊಡಲಾಗುತ್ತದೆ. ಈ ಸ್ಪರ್ಧೆ ವೀಕ್ಷಿಸಲು ಹಾಗೂ ಹೋರಿ ಹಿಡಿಯಲು ಭಾರೀ ದೊಡ್ಡ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿರುತ್ತಾರೆ. ವಿವಿಧೆಡೆಯಿಂದಲೂ ಜನರು ಆಗಮಿಸುತ್ತಾರೆ.
ಹೋರಿ ಹಿಡಿಯಲು ಮುಂದಾಗುವವರು ಕೊಂಚ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಹೋರಿ ತಿವಿತ ಇಲ್ಲವೇ ಅದರಡಿ ಸಿಲುಕಿ ಗಾಯಗೊಳ್ಳಬೇಕಾಗುತ್ತದೆ. ಈ ಹಿಂದಿನ ಸಂದರ್ಭಗಳಲ್ಲಿ ಕೆಲವರು ಹೋರಿ ತಿವಿತದಿಂದ ಮೃತಪಟ್ಟಿರುವ, ಮಾರಣಾಂತಿಕವಾಗಿ ಗಾಯಗೊಂಡಿರುವ ಹಲವು ಘಟನೆಗಳು ನಡೆದಿವೆ. ಮತ್ತೊಂದೆಡೆ, ಕೂಗಾಟ-ಶಿಳ್ಳೆ ಕೂಗಿನಿಂದ ಬೆದರುವ ಹೋರಿಗಳು ಇಕ್ಕೆಲಗಳಲ್ಲಿ ನಿಂತಿರುವ ನಾಗರಿಕರ ಮೇಲೂ ನುಗ್ಗಿ ಅನಾಹುತ ಸೃಷ್ಟಿಸಲಿವೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳು ಸ್ಪರ್ಧೆ ಆಯೋಜನೆ ಮಾಡುವವರಿಗೆ ಕಳೆದ ಕೆಲವು ವರ್ಷಗಳಿಂದ ಅನುಮತಿ ಪಡೆಯುವಂತೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾರಂಭಿಸಿವೆ. ಆಯೋಜಕರಿಗೆ ಕೆಲವು ನಿಬಂಧನೆಗಳನ್ನು ಕೂಡ ಹಾಕುತ್ತಿದೆ. ಸಾವು-ನೋವಿಗೆ ಆಸ್ಪದವಾಗದಂತೆ ಎಚ್ಚರ ವಹಿಸುವಂತೆ ಸೂಚನೆ ನೀಡುತ್ತಿವೆ.
ಅದೆಷ್ಟೋ ಗ್ರಾಮಗಳಲ್ಲಿ ಸ್ಪರ್ಧೆ ಆಯೋಜನೆಗೆ ಅನುಮತಿ ಪಡೆಯುವುದಿರಲಿ, ಕನಿಷ್ಠ ಸುರಕ್ಷತಾ ಕ್ರಮಗಳ ಪಾಲನೆ ಕೂಡ ಮಾಡುತ್ತಿಲ್ಲವೆಂಬ ಮಾಹಿತಿ ಸ್ವತಃ ಅಧಿಕಾರಿಗಳ ವಲಯದಿಂದಲೇ ಕೇಳಿಬರುತ್ತದೆ. ಕೆಲವೊಮ್ಮೆ ಈ ಬಗ್ಗೆ ಸಂಬಂಧಿಸಿದವರಿಗೆ ತಿಳಿಹೇಳಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ತಲತಲಾಂತರದಿಂದ ಸ್ಪರ್ಧೆ ಆಯೋಜನೆ ಮಾಡಿಕೊಂಡು ಬರುತ್ತಿದ್ದೆವೆ. ಈಗೇಕೆ ಅನುಮತಿ ಪಡೆಯಬೇಕು ಎಂದು ಕೆಲವರು ಪ್ರಶ್ನಿಸುತ್ತಾರೆ ಎಂದು ಅಧಿಕಾರಿಯೊಬ್ಬರು ಹೇಳುತ್ತಾರೆ.
ಆದರೆ ಈ ಬಾರಿ ಜಿಲ್ಲಾಡಳಿತವು ಸ್ಪರ್ಧೆಗಳ ಆಯೋಜನೆಗೆ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತಂತೆ ತಹಶೀಲ್ದಾರ್ಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಸ್ಪರ್ಧೆಗಳಲ್ಲಿ ಕಟ್ಟುನಿಟ್ಟಿನ ಸುರಕ್ಷಾ ಕ್ರಮಗಳ ಪಾಲನೆ ಮಾಡುವಂತೆಯೂ ಆದೇಶಿಸಿದೆ. ನಿಯಮ ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆಯೂ ಸೂಚಿಸಿದೆ.
ನಿಯಮ ಪಾಲನೆ ಮಾಡುವಂತೆ ಆಯೋಜಕರ ಮನವೊಲಿಸುವುದು ದೊಡ್ಡ ಸವಾಲಿನ ಕೆಲಸವಾಗಿದ್ದು, ಕಿರಿಕಿರಿಯಾಗಿ ಪರಿಣಮಿಸುತ್ತಿದೆ.
ಜಿಲ್ಲೆಯ ವಿವಿಧೆಡೆ ಆಯೋಜನೆ ಮಾಡಲಾಗುತ್ತಿರುವ ಹೋರಿ ಬೆದರಿಸುವ ಸ್ಪರ್ಧೆಗಳು ದಿನದಿಂದ ದಿನಕ್ಕೆ ಅಪಾಯಕಾರಿಯಾಗಿ ಪರಿಣಮಿಸುತ್ತಿವೆ. ಸಾವು-ನೋವು ಸಂಭವಿಸುವುದು ಸೇರಿದಂತೆ ಹಲವು ರೀತಿಯ ಅಹಿತಕರ ಘಟನೆಗಳಿಗೆ ಎಡೆ ಮಾಡಿಕೊಡುತ್ತಿರುವುದು ಆಡಳಿತ ವ್ಯವಸ್ಥೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿರುವುದಂತೂ ಸತ್ಯವಾಗಿದೆ.
,,,,,,,,,,,,,,,,,,,,,,,,,,,,,,,,,,,,,,,,,

No comments:
Post a Comment