ಗುಂಡಿ-ಗೊಟರಿನ ರಸ್ತೆ: ಗಮನಹರಿಸದ ಪಾಲಿಕೆ ಆಡಳಿತ
: ಹಲವು ತಿಂಗಳುಗಳಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ - ಗೊಟರುಗಳ ದುರಸ್ತಿಯೇ ಆಗಿಲ್ಲ. ನಗರ ವ್ಯಾಪ್ತಿಯ ಹಲವು ಬಡಾವಣೆಗಳಲ್ಲಿರುವ ಮುಖ್ಯ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಗುಂಡಿ - ಗೊಟರುಗಳು ಬಿದ್ದಿವೆ. ಜನ - ವಾಹನ ಸಂಚಾರ ದುಸ್ತರವಾಗಿ ಪರಿಣಮಿಸಿದೆ. ರಸ್ತೆಯ ಅವ್ಯವಸ್ಥೆಯಿಂದ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಮತ್ತೊಂದೆಡೆ, ಧೂಳಿನ ಪ್ರಮಾಣ ಕೂಡ ಹೆಚ್ಚಳವಾಗಿದ್ದು, ನಾಗರಿಕರು ನಾನಾ ರೀತಿಯ ಅನಾರೋಗ್ಯ ಸಮಸ್ಯೆಗೂ ಸಿಲುಕುವಂತಾಗಿದೆ.
ಇಷ್ಟೆಲ್ಲ ಅವ್ಯವಸ್ಥೆ ಮನೆಮಾಡಿದ್ದರೂ ಇಲ್ಲಿಯವರೆಗೂ ಪಾಲಿಕೆ ಆಡಳಿತ ರಸ್ತೆಗಳ ಗುಂಡಿ - ಗೊಟರು ಮುಚ್ಚಲು ಯಾವುದೇ ಕ್ರಮಕೈಗೊಂಡಿಲ್ಲ. ತನಗೂ ಇದಕ್ಕೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದೆ. ಇದರಿಂದ ಸಾರ್ವಜನಿಕರ ಗೋಳು ಕೇಳುವವರು ಯಾರೂ ಇಲ್ಲದಂತಾಗಿದೆ.
ನಗರದ ಹೃದಯಭಾಗದಲ್ಲಿರುವ, ಪ್ರತಿನಿತ್ಯ ಸಾವಿರಾರು ಜನ - ವಾಹನ ಸಂಚಾರವಿರುವ ಪಾರ್ಕ್ ಬಡಾವಣೆ ಹಾಗೂ ತಿಲಕ್ನಗರದ ಮುಖ್ಯ ರಸ್ತೆಗಳಲ್ಲಿಯೇ ಭಾರೀ ದೊಡ್ಡ ಪ್ರಮಾಣದ ಗುಂಡಿಗಳು ಬಿದ್ದಿವೆ. ಈ ರಸ್ತೆಯಲ್ಲಿಯೇ ದಿನನಿತ್ಯ ಹಲವು ಪಾಲಿಕೆ ಅಧಿಕಾರಿಗಳು ಸಂಚರಿಸುತ್ತಾರೆ. ಆದಾಗ್ಯೂ ರಸ್ತೆಗಳ ಅವ್ಯವಸ್ಥೆ ಸರಿಪಡಿಸಲು ಮುಂದಾಗಿಲ್ಲ. ಇನ್ನೂ ನಗರದ ಇತರೆ ಬಡಾವಣೆಗಳಲ್ಲಿ ರಸ್ತೆಗಳ ದುಃಸ್ಥಿತಿ ಇದೇ ರೀತಿ ಇದೆ.
ಗುಂಡಿ - ಗೊಟರು ಬಿದ್ದಿರುವ ರಸ್ತೆಗಳಲ್ಲಿ ದ್ವಿ ಚಕ್ರ ವಾಹನ ಚಾಲನೆ ಮಾಡುವುದೇ ದುಸ್ತರವಾಗಿದೆ. ರಾತ್ರಿ ಸಮಯದಲ್ಲಂತೂ ಜೀವ ಕೈಯಲ್ಲಿಡಿದು ದ್ವಿ ಚಕ್ರ ವಾಹನ ಸವಾರರು ವಾಹನ ಚಲಾಯಿಸುವಂತಾಗಿದೆ. ಕೊಂಚ ಹೆಚ್ಚುಕಮ್ಮಿಯಾದರೂ ಅಪಘಾತ ನಿಶ್ಚಿತ ಎಂಬಂತಾಗಿದೆ. ಈಗಾಗಲೇ ಹಲವು ದ್ವಿ ಚಕ್ರ ವಾಹನ ಸವಾರರು ರಾತ್ರಿಯ ವೇಳೆಯಿರಲಿ, ಹಗಲು ಹೊತ್ತಿನಲ್ಲಿಯೇ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ - ಗೊಟರಿನ ಕಾರಣದಿಂದಲೇ ಅಪಘಾತಕ್ಕೀಡಾಗುತ್ತಿದ್ದಾರೆ.
ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಹಾಗೂ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ - ಗೊಟರುಗಳಲ್ಲಿ ಮಣ್ಣು ತುಂಬಿಕೊಂಡಿರುವುದರಿಂದ ಧೂಳಿನ ಪ್ರಮಾಣ ಹೆಚ್ಚಾಗಿದೆ. ಧೂಳಿನಿಂದ ಸಮಸ್ಯೆ ಎದುರಿಸುವಂತಾಗಿದೆ.
ಸಾಮಾನ್ಯವಾಗಿ ಮಳೆಗಾಲದ ವೇಳೆ ರಸ್ತೆಗಳಲ್ಲಿ ಗುಂಡಿ - ಗೊಟರು ಬೀಳುತ್ತವೆ. ಮಳೆಯ ಕಾರಣದಿಂದ ಈ ಸಮಯದಲ್ಲಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವುದಿಲ್ಲ. ಮಳೆಗಾಲ ಪೂರ್ಣಗೊಂಡ ನಂತರ ರಸ್ತೆಗಳ ಅವ್ಯವಸ್ಥೆ ಸರಿಪಡಿಸಲು ಸ್ಥಳಿಯಾಡಳಿತ ಕ್ರಮಕೈಗೊಳ್ಳುತ್ತದೆ. ಇದು ಕಳೆದ ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಪ್ರಕ್ರಿಯೆಯಾಗಿದೆ. ಆದರೆ ಈ ಬಾರಿ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ - ಗೊಟರು ಮುಚ್ಚುವುದಕ್ಕೆ ಹಾಗೂ ರಸ್ತೆಗಳಲ್ಲಿ ಆವರಿಸಿರುವ ಧೂಳು ತೆರವಿಗೆ ಮಹಾನಗರ ಪಾಲಿಕೆ ಆಡಳಿತ ಗಮನಹರಿಸಿಲ್ಲ. ಇದಕ್ಕೆ ಕಾರಣ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವ ಉದ್ದೇಶ ಎನ್ನಲಾಗುತ್ತಿದೆ.
ಇನ್ನಾದರೂ ಮಹಾನಗರ ಪಾಲಿಕೆ ಆಡಳಿತ ಎಚ್ಚೆತ್ತುಕೊಳ್ಳಬೇಕಾಗಿದೆ. ವಿವಿಧ ಬಡಾವಣೆಗಳ ಮುಖ್ಯ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ - ಗೊಟರು ಮುಚ್ಚಲು ಕ್ರಮಕೈಗೊಳ್ಳಬೇಕಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ - ಗೊಟರು ಮುಚ್ಚಲು ಕ್ರಮಕೈಗೊಳ್ಳುವಂತೆ ನಾಗರಿಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಮೇಯರ್ ಜೊತೆ ಸಮಾಲೋಚನೆ ನಡೆಸಿದ್ದೇನೆ. ಇನ್ನೊಮ್ಮೆ ಚರ್ಚಿಸಿ ಗುಂಡಿ - ಗೊಟರು ಮುಚ್ಚಲು ಅಗತ್ಯ ಕ್ರಮಕೈಗೊಳ್ಳುವಂತೆ ಮನವಿ ಮಾಡುತ್ತೇನೆ.
-ೆ ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷ ಐಡಿಯಲ್ ಗೋಪಿ
ಪಿಡಬ್ಲ್ಯೂಡಿ ಇಲಾಖೆಯಿಂದಲೂ ನಿರ್ಲಕ್ಷ್ಯ
ಪಿಡಬ್ಲ್ಯೂಡಿ ಇಲಾಖೆಯ ಶಿವಮೊಗ್ಗ ವ್ಯಾಪ್ತಿಯ ಅಧೀಕ್ಷಕ ಎಂಜಿನಿಯರ್ ಬಿ.ಎಸ್.ಬಾಲಕೃಷ್ಣ ಕಾಲಮಿತಿಯೊಳಗೆ ಇಲಾಖೆ ವ್ಯಾಪ್ತಿಯ ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿಗಳಲ್ಲಿ ಬಿದ್ದಿರುವ ಗುಂಡಿ-ಗೊಟರು ಮುಚ್ಚಲು ಕ್ರಮಕೈಗೊಳ್ಳುವುದಾಗಿ ಹೇಳಿದ್ದರು. ಆದರೆ ಅವರ ವೇಗಕ್ಕೆ ಅನುಗುಣವಾಗಿ ಅವರ ಕೆಳಹಂತದ ಅಧಿಕಾರಿಗಳು ಕಾರ್ಯನಿರ್ವಹಣೆ ಮಾಡದ ಕಾರಣದಿಂದ ಇಂದಿಗೂ ಪಿಡಬ್ಲ್ಯೂಡಿ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ - ಗೊಟರುಗಳಿಗೆ ಮೋಕ್ಷ ಸಿಕ್ಕಿಲ್ಲ. ಶಿವಮೊಗ್ಗ - ರಾಮನಗರ ಜಿಲ್ಲಾ ಹೆದ್ದಾರಿಯ ನಗರ ವ್ಯಾಪ್ತಿಯ ಹಲವೆಡೆ ರಸ್ತೆಯು ಹಾಳಾಗಿದೆ. ಭಾರೀ ದೊಡ್ಡ ಗುಂಡಿ - ಗೊಟರುಗಳು ಬಿದ್ದಿವೆ. ಆದರೆ ಇಲ್ಲಿಯವರೆಗೂ ಪಿಡಬ್ಲ್ಯೂಡಿ ವಿಶೇಷ ವಿಭಾಗದ ಅಧಿಕಾರಿಗಳು ರಸ್ತೆ ದುರಸ್ತಿಗೆ ಕ್ರಮಕೈಗೊಂಡಿಲ್ಲ. ಸಂಪೂರ್ಣ ನಿರ್ಲಕ್ಷ್ಯವಹಿಸಿದ್ದಾರೆ. ಇದರಿಂದ ವಾಹನ ಸವಾರರು ತೀವ್ರ ತೊಂದರೆಗೊಳಗಾಗುವಂತಾಗಿದೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ತಮ್ಮ ಕೆಳಹಂತದ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಮಾಡಬೇಕಾಗಿದೆ.
-------------------------------------

No comments:
Post a Comment