ಕುವೆಂಪು ರಸ್ತೆ ವಿಸ್ತರಣೆ ಎಂದು?
ಕುವೆಂಪು ರಸ್ತೆಯ ಕೆಲವು ಸ್ಥಳಗಳಲ್ಲಿ ಬೇಕಾಬಿಟ್ಟಿಯಾಗಿ ಕಟ್ಟಡಗಳ ನಿರ್ಮಾಣ ಮಾಡಲಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳ ಕಣ್ಣಿಗೆ ಇವು ಬೀಳದಿರುವುದೇ ಆಶ್ಚರ್ಯದ ಸಂಗತಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಧೋರಣೆಯಿಂದ ಈ ರಸ್ತೆಯಲ್ಲಿ ನಾಗರಿಕರು ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಸ್ಥಳೀಯ ಜನಪ್ರತಿನಿಧಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕುವೆಂಪು ರಸ್ತೆ ವಿಸ್ತಾರಗೊಳಿಸಲು ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಮಾಡಿಸಬೇಕಿದೆ. ಇದರಿಂದ ನಗರದ ಮಧ್ಯೆ ಹದುಹೋಗಿರುವ ಈ ರಸ್ತೆಯಲ್ಲಿ ಸಂಚಾರ ಸುಗಮಗೊಳ್ಳಲಿದೆ. ಎಲ್ಲದಕ್ಕೂ ಮೊದಲು ಒತ್ತುವರಿದಾರರಿಗೆ ಬಿಸಿಮುಟ್ಟಿಸುವ ಕೆಲಸವನ್ನು ಪಾಲಿಕೆ ಆರಂಭಿಸಬೇಕಿದೆ.
ಶಿವಮೊಗ್ಗ: ನಗರದಲ್ಲಿ ಅತ್ಯಧಿಕ ಜನ-ವಾಹನ ಸಂಚಾರ ದಟ್ಟಣೆಯಿರುವ ರಸ್ತೆಗಳಲ್ಲೊಂದಾಗಿರುವ ಹಾಗೆಯೇ ’ಅತ್ಯಂತ ಅಪಾಯಕಾರಿ’ ರಸ್ತೆಯೂ ಆಗಿರುವ ಕುವೆಂಪು ರಸ್ತೆ ವಿಸ್ತರಣೆ ಪ್ರಸ್ತಾಪ ಸಂಪೂರ್ಣವಾಗಿ ನೆನೆಗುದಿಗೆ ಬಿದ್ದಿದೆ. ಸದ್ಯದ ಸ್ಥಿತಿಗತಿ ಗಮನಿಸಿದರೆ ಈ ರಸ್ತೆ ಅಗಲೀಕರಣ ಆರಂಭವಾಗುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ.
ಸುಮಾರು ಒಂದೂವರೆ ವರ್ಷದ ಹಿಂದೆ ಕುವೆಂಪು ರಸ್ತೆ ವಿಸ್ತಾರಗೊಳಿಸಿ ಮೇಲ್ದರ್ಜೆಗೇರಿಸಲು ಮಹಾನಗರ ಪಾಲಿಕೆ ಆಡಳಿತ ನಿರ್ಧರಿಸಿತ್ತು. ಲೋಕೋಪಯೋಗಿ ಇಲಾಖೆಯ ಮೂಲಕ ರಸ್ತೆಯ ಅಗಲೀಕರಣ ಹಾಗೂ ಮೇಲ್ದರ್ಜೆಗೇರಿಸಲು ತಗಲುವ ಖರ್ಚು - ವೆಚ್ಚಗಳ ಸಮಗ್ರ ಅಂದಾಜು ಪಟ್ಟಿಯನ್ನು ಸಿದ್ದಪಡಿಸಲಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ತೆರವುಗೊಳ್ಳಲಿರುವ ಕಟ್ಟಡಗಳ ವಿವರ, ಭೂ ಸ್ವಾದೀನಗೊಳಿಸಬೇಕಾಗಿರುವ ಪ್ರದೇಶದ ವಿವರಗಳನ್ನು ಕೂಡ ಲೋಕೋಪಯೋಗಿ ಇಲಾಖೆ ಸಿದ್ಧಪಡಿಸಿತ್ತು. ಸುಮಾರು 67 ರಿಂದ 70 ಕೋಟಿ ರೂ. ಅಗತ್ಯವೆಂದು ಹೇಳಿತ್ತು. ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಮೂಲಕವೇ ಅನುದಾನ ಬಿಡುಗಡೆ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಆದರೆ ಈ ಯೋಜನೆಗೆ ಸಂಬಂಧಿಸಿದ ಕಡತಗಳು ಬೆಂಗಳೂರಿನಲ್ಲಿ ಧೂಳು ಹಿಡಿಯುತ್ತಿದ್ದು, ಸರ್ಕಾರ ರಸ್ತೆ ಅಗಲೀಕರಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ. ಲೋಕೋಪಯೋಗಿ ಇಲಾಖೆಯ ಮೂಲಗಳು ಹೇಳುವ ಪ್ರಕಾರ, ಸದ್ಯಕ್ಕೆ ಈ ಯೋಜನೆಗೆ ಅನುದಾನ ಬಿಡುಗಡೆಯಾಗುವ ಲಕ್ಷಣಗಳು ಇಲ್ಲ.
ನಗರದ ಹೃದಯ ಭಾಗದಲ್ಲಿ ಹಾದು ಹೋಗಿರುವ ಕುವೆಂಪು ರಸ್ತೆಯು ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಹೆದ್ದಾರಿ ಸೇರಿದಂತೆ ಹಲವು ಪ್ರಮುಖ ರಸ್ತೆಗಳ ಸಂಪರ್ಕ ಕೊಂಡಿಯಾಗಿದೆ. ಪ್ರಮುಖ ವ್ಯಾಪಾರ, ವಹಿವಾಟು ಕೇಂದ್ರಗಳು, ಸರ್ಕಾರಿ ಇಲಾಖೆ ಕಚೇರಿ ಕಟ್ಟಡಗಳು ಈ ರಸ್ತೆಯ ಇಕ್ಕೆಲಗಳಲ್ಲಿವೆ. ಇದರಿಂದ ಈ ರಸ್ತೆಯಲ್ಲಿ ಅತ್ಯದಿಕ ಜನ-ವಾಹನ ಸಂಚಾರ ದಟ್ಟಣೆಯಿದೆ. ಈ ರಸ್ತೆಯಲ್ಲಿ ಪಾದಚಾರಿಗಳ ಸಂಚಾರಕ್ಕೆ ಫುಟ್‌ಪಾತ್ ವ್ಯವಸ್ಥೆಯೇ ಇಲ್ಲವಾಗಿದೆ. ರಸ್ತೆ ಮಧ್ಯದಲ್ಲಿಯೇ ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ಸಣ್ಣಪುಟ್ಟ ರಸ್ತೆ ಅಪಘಾತಗಳು ಸರ್ವೇ ಸಾಮಾನ್ಯ ಎಂಬಂತಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ಕಿ.ಮೀ.ನಷ್ಟಿರುವ ಈ ರಸ್ತೆಯನ್ನು ವಿಸ್ತಾರಗೊಳಿಸಿ ದ್ವಿ ಪಥ ರಸ್ತೆಯಾಗಿ ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿತ್ತು.
ಈ ರಸ್ತೆಯ ಇಕ್ಕೆಲಗಳಲ್ಲಿ ಕೆಲವೆಡೆ ರಸ್ತೆಯ ಜಾಗವನ್ನು ಅವ್ಯಾಹತವಾಗಿ ಒತ್ತುವರಿ ಮಾಡಲಾಗಿದೆ. ಕೆಲವು ಕಟ್ಟಡಗಳ ಕಾಂಪೌಂಡ್ ರಸ್ತೆ ಬದಿಯಲ್ಲಿಯೇ ಇದೆ. ಮತ್ತೆ ಕೆಲವು ಕಟ್ಟಡಗಳು ರಸ್ತೆ ಜಾಗ ಸೇರಿಕೊಂಡು ನಿರ್ಮಾಣ ಮಾಡಲಾಗಿದೆ. ಸೆಟ್‌ಬ್ಯಾಕ್ ನಿಯಮಗಳ ಯದ್ವಾತದ್ವಾ ಉಲ್ಲಂಘನೆಯಾಗಿದೆ. ಮತ್ತೊಂದೆಡೆ ಸ್ಥಳಿಯಾಡಳಿತ ಮಾತ್ರ ಈ ಬಗ್ಗೆ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯವಹಿಸಿಕೊಂಡು ಬರುತ್ತಿದೆ.
ಕುವೆಂಪು ರಸ್ತೆಯಲ್ಲಿ ಹಲವು ಪ್ರಭಾವಿ ವ್ಯಕ್ತಿಗಳ ಕಟ್ಟಡಗಳಿವೆ. ಒಂದು ವೇಳೆ ಏನಾದರೂ ರಸ್ತೆ ಅಗಲೀಕರಣವಾದರೆ ಪ್ರಭಾವಿಗಳ ಕಟ್ಟಡಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಭಾವಿಗಳು ರಸ್ತೆ ವಿಸ್ತಾರವಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ವರ್ಷಗಳೇ ಕಳೆಯುತ್ತಾ ಬಂದರೂ ಈ ರಸ್ತೆಯ ವಿಸ್ತರಣೆ ಪ್ರಕ್ರಿಯೆಯೇ ಆರಂಭವಾಗಿಲ್ಲ ಎಂಬ ಮಾತು ಸರ್ವೇಸಾಮಾನ್ಯವಾಗಿ ಕೇಳಿಬರುತ್ತಿದೆ.
ಕುವೆಂಪು ರಸ್ತೆಯ ಕೆಲವು ಸ್ಥಳಗಳಲ್ಲಿ ಬೇಕಾಬಿಟ್ಟಿಯಾಗಿ ಕಟ್ಟಡಗಳ ನಿರ್ಮಾಣ ಮಾಡಲಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳ ಕಣ್ಣಿಗೆ ಇವು ಬೀಳದಿರುವುದೇ ಆಶ್ಚರ್ಯದ ಸಂಗತಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಧೋರಣೆಯಿಂದ ಈ ರಸ್ತೆಯಲ್ಲಿ ನಾಗರಿಕರು ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನಾದರೂ ಸ್ಥಳೀಯ ಜನಪ್ರತಿನಿಧಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕುವೆಂಪು ರಸ್ತೆ ವಿಸ್ತಾರಗೊಳಿಸಲು ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಮಾಡಿಸಬೇಕಿದೆ. ಇದರಿಂದ ನಗರದ ಮಧ್ಯೆ ಹದುಹೋಗಿರುವ ಈ ರಸ್ತೆಯಲ್ಲಿ ಸಂಚಾರ ಸುಗಮಗೊಳ್ಳಲಿದೆ. ಎಲ್ಲದಕ್ಕೂ ಮೊದಲು ಒತ್ತುವರಿದಾರರಿಗೆ ಬಿಸಿಮುಟ್ಟಿಸುವ ಕೆಲಸವನ್ನು ಪಾಲಿಕೆ ಆರಂಭಿಸಬೇಕಿದೆ.
------------------------------------